ADVERTISEMENT

ಭಾರತ – ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನ: ಟ್ರಂಪ್‌

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 19:16 IST
Last Updated 23 ಫೆಬ್ರುವರಿ 2019, 19:16 IST
ಡೊನಾಲ್ಡ್‌ ಟ್ರಂಪ್‌
ಡೊನಾಲ್ಡ್‌ ಟ್ರಂಪ್‌   

ವಾಷಿಂಗ್ಟನ್‌: ‘ಸದ್ಯ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಅಪಾಯಕಾರಿ ಹಂತ ತಲುಪಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

‘ಪುಲ್ವಾಮಾ ಉಗ್ರರ ದಾಳಿಯಲ್ಲಿ ಭಾರತ ಹಲವು ಯೋಧರನ್ನು ಕಳೆದುಕೊಂಡಿದ್ದು, ಕಠಿಣ ಜವಾಬು ನೀಡುವ ಸಾಧ್ಯತೆ ಇದೆ’ ಎಂದು ಭವಿಷ್ಯ ನುಡಿದಿದ್ದಾರೆ.

‘ಉಭಯ ದೇಶಗಳ ನಡುವೆ ಸಾಕಷ್ಟುಸಮಸ್ಯೆಗಳಿವೆ. ಅದರಲ್ಲೂ ಕಾಶ್ಮೀರದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಅಪಾಯಕಾರಿ ಸನ್ನಿವೇಶ ಸೃಷ್ಟಿಯಾಗಿದೆ’ ಎಂದು ಪುಲ್ವಾಮಾ ದಾಳಿ ಬಳಿಕ ಉಂಟಾಗಿರುವ ಗಂಭೀರ ಪರಿಸ್ಥಿತಿಯನ್ನು ಟ್ರಂಪ್‌ ವಿಶ್ಲೇಷಿಸಿದ್ದಾರೆ.

ADVERTISEMENT

ನೆರವು ಸ್ಥಗಿತ: ‘ಪಾಕಿಸ್ತಾನಕ್ಕೆ ನೀಡುತ್ತಿದ್ದ 1.3 ಬಿಲಿಯನ್‌ ಡಾಲರ್‌ (₹ 9234.55 ಕೋಟಿ) ಹಣಕಾಸು ನೆರವು ಸ್ಥಗಿತಗೊಳಿಸಿದ್ದ ಬಳಿಕವೂ ಆ ದೇಶದ ಜತೆ ಉತ್ತಮ ಸಂಬಂಧ ಕಾಯ್ದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.

‘ಅಮೆರಿಕದ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಪಾಕಿಸ್ತಾನ ಪ್ರತಿ ವರ್ಷ 1.3 ಬಿಲಿಯನ್‌ ಡಾಲರ್‌ ನೆರವು ಪಡೆಯುತ್ತಿತ್ತು. ನಾನು ಅಧಿಕಾರಕ್ಕೆ ಬಂದ ನಂತರ ಹಣಕಾಸು ನೆರವು ಸ್ಥಗಿತಗೊಳಿಸಿದ್ದೇನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.