ADVERTISEMENT

ರಷ್ಯಾ ಸೇನೆಯ ಭಾಗಶಃ ಸಜ್ಜುಗೊಳಿಸುವಿಕೆಗೆ ಪುಟಿನ್ ಆದೇಶ

ರಾಯಿಟರ್ಸ್
Published 21 ಸೆಪ್ಟೆಂಬರ್ 2022, 7:12 IST
Last Updated 21 ಸೆಪ್ಟೆಂಬರ್ 2022, 7:12 IST
   

ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬುಧವಾರ ರಷ್ಯಾದ ಸೇನೆಯ ಭಾಗಶಃ ಸಜ್ಜುಗೊಳಿಸುವಿಕೆಗೆ ಆದೇಶಿಸಿದ್ದಾರೆ. ಎರಡನೇ ಮಹಾಯುದ್ಧದ ನಂತರ ರಷ್ಯಾ ಅಧ್ಯಕ್ಷರೊಬ್ಬರು ನೀಡಿದ ಈ ರೀತಿಯ ಮೊದಲ ಆದೇಶವಾಗಿದೆ.

ಪಾಶ್ಚಿಮಾತ್ಯ ದೇಶಗಳು ‘ಪರಮಾಣು ಬ್ಲ್ಯಾಕ್‌ಮೇಲ್’ಮುಂದುವರೆಸಿದರೆ ರಷ್ಯಾ ತನ್ನ ಎಲ್ಲ ವಿಶಾಲವಾದ ಶಸ್ತ್ರಾಗಾರದ ಶಕ್ತಿಯೊಂದಿಗೆ ಪ್ರತಿಕ್ರಿಯಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

‘ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಬೆದರಿಕೆಯೊಡ್ಡಿದರೆ, ನಮ್ಮ ಜನರನ್ನು ರಕ್ಷಿಸಲು ನಾವು ಲಭ್ಯವಿರುವ ಎಲ್ಲಾ ವಿಧಾನಗಳನ್ನು ಅನುಸರಿಸುತ್ತೇವೆ' ಎಂದು ಪುಟಿನ್ ರಾಷ್ಟ್ರವನ್ನು ಉದ್ದೇಶಿಸಿ ಟೆಲಿವಿಜನ್ ಭಾಷಣದಲ್ಲಿ ಹೇಳಿದರು.

ಭಾಗಶಃ ಸೇನೆ ಸಜ್ಜುಗೊಳಿಸುವ ಆದೇಶಕ್ಕೆ ಸಹಿ ಹಾಕಿರುವುದಾಗಿ ಪುಟಿನ್ ತಿಳಿಸಿದರು. ಇದು ಸಂಘರ್ಷವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

ADVERTISEMENT

ಪೂರ್ವ ಉಕ್ರೇನ್‌ನ ಡಾನ್‌ಬಾಸ್ ಪ್ರದೇಶವನ್ನು ಸ್ವತಂತ್ರಗೊಳಿಸುವುದು ನನ್ನ ಗುರಿಯಾಗಿದೆ ಎಂದು ಪುಟಿನ್ ಹೇಳಿದರು. ರಷ್ಯಾದ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಹೆಚ್ಚಿನ ಜನರು ಕೀವ್‌ನಿಂದ ಆಡಳಿತ ನಡೆಯುವುದನ್ನು ಬಯಸುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.