ADVERTISEMENT

ಬಿಜೆಪಿ ನಾಯಕರ ಇಸ್ಲಾಂ ವಿರೋಧಿ ಹೇಳಿಕೆ: ಭಾರತೀಯ ರಾಯಭಾರಿಗೆ ಕತಾರ್ ಸಮನ್ಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2022, 14:33 IST
Last Updated 5 ಜೂನ್ 2022, 14:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದೋಹಾ: ಭಾರತದಲ್ಲಿ ಆಡಳಿತ ಪಕ್ಷದ ನಾಯಕರು ಇಸ್ಲಾಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕತಾರ್‌ನ ವಿದೇಶಾಂಗ ಸಚಿವಾಲಯವು ಭಾರತೀಯ ರಾಯಭಾರಿ ಡಾ. ದೀಪಕ್ ಮಿತ್ತಲ್ ಅವರಿಗೆ ಭಾನುವಾರ ಸಮನ್ಸ್ ಜಾರಿ ಮಾಡಿದೆ.

ಪ್ರವಾದಿ ಮುಹಮ್ಮದ್ ವಿರುದ್ಧ ಬಿಜೆಪಿ ನಾಯಕಿ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಯನ್ನು ಕತಾರ್ ಖಂಡಿಸಿದೆ. ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಮಧ್ಯೆ, ವಿವಾದಕ್ಕೆ ಕಾರಣವಾಗಿರುವ ಹೇಳಿಕೆಯು ಭಾರತ ಸರ್ಕಾರದ್ದಲ್ಲ ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಮತ್ತು ದೆಹಲಿ ಘಟಕದ ಮಾಧ್ಯಮ ವಿಭಾಗದ ನೇತೃತ್ವ ವಹಿಸಿದ್ದ ನವೀನ್ ಕುಮಾರ್ ಜಿಂದಾಲ್ ನೀಡಿದ್ದ ಹೇಳಿಕೆಗೆ ಅರಬ್‌ ದೇಶಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಕೆಲವು ದೇಶಗಳಲ್ಲಿ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿ, ಟ್ವಿಟರ್ ಅಭಿಯಾನ ನಡೆದಿದೆ.

ಈ ಮಧ್ಯೆ, ನೂಪುರ್‌ ಶರ್ಮಾ ಅವರನ್ನು ಬಿಜೆಪಿಯು ಪಕ್ಷದಿಂದ ಅಮಾನತುಗೊಳಿಸಿದ್ದು, ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.