ವಾಷಿಂಗ್ಟನ್: ಈ ವರ್ಷ ನಡೆಯಲಿರುವ ‘ಕ್ವಾಡ್ ನಾಯಕತ್ವ ಶೃಂಗಸಭೆ’ಯ ಆತಿಥ್ಯವನ್ನು ಭಾರತ ವಹಿಸಿಕೊಳ್ಳಲಿದೆ. ಈ ಶೃಂಗಸಭೆ ವರ್ಷಾಂತ್ಯಕ್ಕೆ ನಡೆಯಲಿದೆ.
ಇಲ್ಲಿ ನಡೆದ ಕ್ವಾಡ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಈ ಕುರಿತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಆಯೋಜಿಸಿದ್ದ ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ಆಸ್ಟ್ರೇಲಿಯಾದ ಪೆನ್ನಿ ವಾಂಗ್, ಜಪಾನ್‌ನ ಇವಯಾ ತಕೇಶಿ ಪಾಲ್ಗೊಂಡಿದ್ದರು. ಅಮೆರಿಕ, ಭಾರತ, ಆಸ್ಟ್ರೇಲಿಯಾ ಹಾಗೂ ಜಪಾನ್, ಕ್ವಾಡ್ ಸದಸ್ಯ ರಾಷ್ಟ್ರಗಳು.
ಎಚ್ಚರಿಕೆ:ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶ ಸೇರಿದಂತೆ ಇತರ ಪ್ರದೇಶಗಳಲ್ಲಿನ ಯಥಾಸ್ಥಿತಿ ಬದಲಾಯಿಸಲು ಯಾವುದೇ ಏಕಪಕ್ಷೀಯ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಕಠಿಣ ಸಂದೇಶವನ್ನು ಚೀನಾಕ್ಕೆ ಕ್ವಾಡ್ ರಾಷ್ಟ್ರಗಳು ರವಾನಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.