ಆಗ್ರಾದಲ್ಲಿರುವ ಐತಿಹಾಸಿಕ ಸ್ಮಾರಕ ತಾಜ್ ಮಹಲ್‌ಗೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.
PTI
ರಿಷಿ ಸುನಕ್ ಅವರು ತಮ್ಮ ಪುತ್ರಿಯರು, ಪತ್ನಿ ಅಕ್ಷತಾ ಹಾಗೂ ಅತ್ತೆ ಸುಧಾ ಮೂರ್ತಿ ಅವರೊಂದಿಗೆ ಶನಿವಾರ ಭೇಟಿ ನೀಡಿ, ಸುಮಾರು ಒಂದೂವರೆ ಗಂಟೆಗಳ ಕಾಲ ಕಳೆದಿದ್ದಾರೆ.
ತಾಜ್‌ಮಹಲ್‌ಗೆ ಭೇಟಿ ಕುರಿತು ರಿಷಿ ಸಂತಸ ವ್ಯಕ್ತಪಡಿಸಿದರು.
ಪ್ರೇಕ್ಷಣೀಯ ಸ್ಥಳದ ಬಗ್ಗೆ ಅಭಿಪ್ರಾಯ ತಿಳಿಸುವ ಪುಸ್ತಕದಲ್ಲಿ (visitors book) ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಾಜ್ ಮಹಲ್‌ನಲ್ಲಿರುವ ಭಾರತೀಯ ಪುರಾತತ್ವ ಸಮೀಕ್ಷೆಯ ಹಿರಿಯ ಸಂರಕ್ಷಣಾ ಸಹಾಯಕರೊಬ್ಬರು ಮಾಹಿತಿ ನೀಡಿದ್ದಾರೆ.
ಭೇಟಿಯ ಸಂದರ್ಭದಲ್ಲಿ ರಿಷಿ ಸುನಕ್ ಮತ್ತು ಅವರ ಕುಟುಂಬಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿತ್ತು ಎಂದು ತಾಜ್ ಸೆಕ್ಯುರಿಟಿಯ ಎಸಿಪಿ ಅರೀಬ್ ಅಹ್ಮದ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.