ಪ್ರಾತಿನಿಧಿಕ ಚಿತ್ರ
ಒಟ್ಟಾವೊ (ಕೆನಡಾ): ಭಾರತ ಮೂಲದ ಮಹಿಳೆಯನ್ನು ಅವರ ಮನೆ ಸಮೀಪವೇ ಹತ್ಯೆ ಮಾಡಿರುವ ಘಟನೆ ಮನಿಟೊಬಾ ಪ್ರಾಂತ್ಯದ ರಾಜಧಾನಿ ವಿನ್ನಿಪೆಗ್‌ನಲ್ಲಿ ನಡೆದಿದೆ. ಈ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ತನ್‌ಪ್ರೀತ್ ಕೌರ್ ಎಂದು ಗುರುತಿಸಲಾಗಿದೆ. ಅವರು ಜೂನ್ 23ರಂದು ಕೆಲಸ ಮುಗಿಸಿ ತಾವು ನೆಲೆಸಿದ್ದ ಅಪಾರ್ಟ್‌ಮೆಂಟ್‌ಗೆ ಸಂಜೆ ವಾಪಸ್ ಆಗುತ್ತಿದ್ದ ವೇಳೆ ಕೃತ್ಯವೆಸಗಲಾಗಿದೆ. ಕೌರ್ ಅವರು ರೋಸ್ಲಿನ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಇಬ್ಬರು ಅಪರಿಚಿತರು ದಾಳಿ ಮಾಡಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ವಿನ್ನಿಪೆಗ್ ಪೊಲೀಸರು ಬುಧವಾರ ಹೇಳಿಕೆ ಬಿಡುಗಡೆ ಮಾಡಿದ್ದು, ದರೋಡೆಗೆ ಯತ್ನಿಸಿದ್ದ ಆಗಂತುಕರು, ಮಹಿಳೆಗೆ ಚಾಕುವಿನಿಂದ ಇರಿದಿದ್ದರು. ಘಟನೆ ನಡೆದಾಗ ಅಕ್ಕಪಕ್ಕದಲ್ಲಿದ್ದವರು ಮಧ್ಯಪ್ರವೇಶಿಸಿದ್ದರಿಂದ ಕೂಡಲೇ, ಮಹಿಳೆಯ ಬಳಿ ಇದ್ದ ವಸ್ತುಗಳನ್ನು ದೋಚಿ ಆರೋಪಿಗಳು ಪರಾರಿಯಾಗಿದ್ದರು. ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಯುವತಿಯನ್ನು ಬಂಧಿಸಲಾಗಿದ್ದು, ಕಸ್ಟಡಿಯಲ್ಲಿ ಇರಿಸಲಾಗಿದೆ. ಹಲ್ಲೆ, ದರೋಡೆಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳು ಆರೋಪಿಯ ಮೇಲೆ ಇವೆ ಎಂದೂ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.