ADVERTISEMENT

ಪ್ರವಾದಿ ಮಹಮ್ಮದರ ಅವಹೇಳನ ವಿವಾದ ಭಾರತದ ಆಂತರಿಕ ವಿಷಯ ಎಂದ ಬಾಂಗ್ಲಾದೇಶ ಸಚಿವ

ಪಿಟಿಐ
Published 13 ಜೂನ್ 2022, 12:21 IST
Last Updated 13 ಜೂನ್ 2022, 12:21 IST
ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆದಿದೆ – ಪಿಟಿಐ ಚಿತ್ರ
ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆದಿದೆ – ಪಿಟಿಐ ಚಿತ್ರ   

ಢಾಕಾ:ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದ ವಿವಾದ ಭಾರತದ ಆಂತರಿಕ ವಿಚಾರ ಎಂದು ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಹಸನ್ ಮಹಮೂದ್ ಹೇಳಿದ್ದಾರೆ.

ಪ್ರವಾದಿ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಾಂಗ್ಲಾದೇಶ ಸರ್ಕಾರವು ರಾಜಿ ಮಾಡಿಕೊಂಡಿದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದು, ಅದು ಬಾಂಗ್ಲಾದೇಶದ ಗಮನ ಸೆಳೆಯುವಂಥ ವಿಷಯವೇ ಅಲ್ಲ ಎಂದು ಹೇಳಿದ್ದಾರೆ.

ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಾಯಕರ ವಿರುದ್ಧ ಕ್ರಮ ಕೈಗೊಂಡಿರುವುದಕ್ಕೆ ಬಿಜೆಪಿಯನ್ನು ಅವರು ಅಭಿನಂದಿಸಿದ್ದಾರೆ.

ಢಾಕಾದಲ್ಲಿ ಭಾರತೀಯ ಪತ್ರಕರ್ತರ ತಂಡವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಾದಕ್ಕೆ ಸಂಬಂಧಿಸಿ ಭಾರತದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಭಾರತ ಸರ್ಕಾರವು ಇನ್ನಷ್ಟು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.