ADVERTISEMENT

ವಿಶ್ವಸಂಸ್ಥೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 13:57 IST
Last Updated 3 ಆಗಸ್ಟ್ 2022, 13:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭಾರತದ ಮೊದಲ ಮಹಿಳಾ ಕಾಯಂ ಪ್ರತಿನಿಧಿಯಾಗಿ ರಾಯಭಾರಿ ರುಚಿರಾಕಂಬೋಜ(58) ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ಟಿ.ಎಸ್. ತಿರುಮೂರ್ತಿ ಅವರಿಂದ ತೆರವಾದ ಸ್ಥಾನಕ್ಕೆ ರುಚಿರಾ ಆಯ್ಕೆಯಾಗಿದ್ದಾರೆ.

1987ನೇ ಬ್ಯಾಚಿನ ಐಎಫ್ಎಸ್‌ ಅಧಿಕಾರಿ ರುಚಿರಾ ಇದಕ್ಕೂ ಮುನ್ನ ಭೂತಾನ್‌ನ ಭಾರತದ ರಾಯಭಾರಿಯಾಗಿದ್ದರು. ಜೂನ್‌ನಲ್ಲಿ ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರನಿಧಿಯಾಗಿ ನೇಮಕಗೊಂಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು , ‘ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿಯೇ ವಿಶ್ವಸಂಸ್ಥೆ ಭಾರತದ ಕಾಯಂ ಪ್ರತಿನಿಧಿಯಾಗಿರುವುದು ಅತ್ಯಂತ ಸಂತೋಷದ ವಿಷಯ’ ಎಂದು ತಿಳಿಸಿದ್ದಾರೆ.

ADVERTISEMENT

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದು, ಭಾರತದ ಅಧಿಕಾರಾವಧಿಯು ಡಿಸೆಂಬರ್‌ನಲ್ಲಿ ಮುಕ್ತಾಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.