ಸಾವು
(ಪ್ರಾತಿನಿಧಿಕ ಚಿತ್ರ)
ಕೀವ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಮೂರು ದಿನಗಳ ಕದನ ವಿರಾಮ ಘೋಷಿಸಿರುವ ನಡುವೆಯೂ, ರಷ್ಯಾ ಪಡೆಗಳು ಉಕ್ರೇನ್ ಮೇಲೆ ಗುರುವಾರ ದಾಳಿ ನಡೆಸಿವೆ. ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಉಕ್ರೇನ್‌ನ ಅಧಿಕಾರಿಗಳು ತಿಳಿಸಿದ್ದಾರೆ.
ರಷ್ಯಾ ಪಡೆಗಳು ಸುಮಿ ಪ್ರಾಂತ್ಯದ ಮೇಲೆ ಕ್ಷಿಪಣಿ ದಾಳಿ ಮಾಡಿವೆ. ಘಟನೆಯಲ್ಲಿ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ನಾಜಿ ಪಡೆಗಳ ವಿರುದ್ಧ ಗೆಲುವು ಸಾಧಿಸಿದ 80ನೇ ವಾರ್ಷಿಕ ದಿನದ ಅಂಗವಾಗಿ, ರಷ್ಯಾವು ಏಕಪಕ್ಷೀಯವಾಗಿ ಮೇ 8ರಿಂದ 10ರವರೆಗೆ ಕದನ ವಿರಾಮ ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.