
ರಷ್ಯಾ ಅಧ್ಯಕ್ಷನ ವ್ಲಾಡಿಮಿರ್ ಪುಟಿನ್
ಮಾಸ್ಕೊ: ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿರುವುದನ್ನು ರಷ್ಯಾ ಖಂಡಿಸಿದೆ. ‘ಅಂತರರಾಷ್ಟ್ರೀಯ ಕಾನೂನು ಉಲ್ಲಂಘಿಸಿ ಸಾರ್ವಭೌಮ ರಾಷ್ಟ್ರದ ವಿರುದ್ಧ ಅಪ್ರಚೋದಿತ ಆಕ್ರಮಣಶೀಲತೆಯು ಖಂಡನೀಯವಾಗಿದ್ದು ಕೂಡಲೇ ರಾಜತಾಂತ್ರಿಕ ಮಾತುಕತೆಗೆ ಮುಂದಾಗಬೇಕು’ ಎಂದು ಆಗ್ರಹಿಸಿದೆ.
ಸ್ವತಂತ್ರ ದೇಶವಾಗಿರುವ ಇರಾನ್ ಮೇಲೆ ಎರಡು ರಾಷ್ಟ್ರಗಳು ಪೂರ್ವಯೋಜಿತವಾಗಿ ದಾಳಿ ನಡೆಸಿವೆ ಎಂದು ರಷ್ಯಾ ವಿದೇಶಾಂಗ ಇಲಾಖೆಯು ಬಣ್ಣಿಸಿದೆ.
ಇರಾನ್ ಮೇಲಿನ ದಾಳಿಗೆ ಕೆನಡಾ ಬೆಂಬಲ ಮಾಂಟ್ರಿಯಲ್ (ಕೆನಡಾ):
ಇರಾನ್ ಮೇಲೆ ಅಮೆರಿಕ ನಡೆಸಿರುವ ಸೇನಾ ದಾಳಿಗೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟೆಹರಾನ್ ತನ್ನ ಪರಮಾಣು ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಹಾಗೂ ಉಗ್ರಗಾಮಿ ಗುಂಪುಗಳಿಗೆ ಬೆಂಬಲ ನಿಲ್ಲಿಸಲು ವಿಫಲವಾಗಿತ್ತು ಎಂದು ಆರೋಪಿಸಿದ್ದಾರೆ.
‘ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದನ್ನು ತಪ್ಪಿಸಲು ಅಲ್ಲಿನ ಆಡಳಿತವು ಅಂತರರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಧಕ್ಕೆ ಉಂಟಾಗುವುದನ್ನು ತಡೆಯಲು ಅಮೆರಿಕ ಸೇನಾ ದಾಳಿಯನ್ನು ಕೆನಡಾ ಕೂಡ ಬೆಂಬಲಿಸುತ್ತದೆ’ ಎಂದು ಅವರು ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಅವರು ಮುಂಬೈನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.