ADVERTISEMENT

ಉಕ್ರೇನ್ ರಾಜಧಾನಿ ಕೀವ್ ಸೇರಿ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮಾರ್ಚ್ 2022, 7:48 IST
Last Updated 7 ಮಾರ್ಚ್ 2022, 7:48 IST
   

ಮಾಸ್ಕೋ ​: ಉಕ್ರೇನ್‌ನ ರಾಜಧಾನಿ ಕೀವ್, ಮರಿಯುಪೋಲ್, ಹಾರ್ಕಿವ್ ಮತ್ತು ಸುಮಿ ನಗರಗಳಲ್ಲಿ ರಷ್ಯಾ ಕದನ ವಿರಾಮವನ್ನು ಘೋಷಿಸಿದೆ. ಕದನ ವಿರಾಮವು ಮಾಸ್ಕೋ ಸಮಯ ಬೆಳಗ್ಗೆ 10 ಗಂಟೆಯಿಂದಜಾರಿಗೆ ಬಂದಿದೆ.

ಉಕ್ರೇನ್‌ನ ನಾಲ್ಕು ನಗರಗಳಿಂದ ನಾಗರಿಕರನ್ನು ಸ್ಥಳಾಂತರಿಸಲು ಕದನ ವಿರಾಮವನ್ನು ಘೋಷಿಸಲಾಗಿದೆ. ರಷ್ಯಾದ ಸೇನೆಯು ಉಕ್ರೇನ್‌ನಲ್ಲಿ ಹಲವುಮಾನವೀಯ ಕಾರಿಡಾರ್‌ಗಳನ್ನು ತೆರೆಯುವುದಾಗಿ ಘೋಷಿಸಿದೆ.

ಶನಿವಾರ, ಮರಿಯುಪೋಲ್ ಮತ್ತು ವೊಲ್ನೋವಾಖಾ ನಗರಗಳಿಂದ ನಾಗರಿಕರು ನಿರ್ಗಮಿಸಲು ರಷ್ಯಾ 5 ಗಂಟೆಗಳ ಕದನ ವಿರಾಮವನ್ನು ಘೋಷಿಸಿತ್ತು. ಆ ಬಳಿಕವೂ ರಷ್ಯಾ ಶೆಲ್ ದಾಳಿ ನಡೆಸಿದ್ದರಿಂದ, ನಾಗರಿಕರ ಸ್ಥಳಾಂತರ ವಿಳಂಬವಾಯಿತು ಎಂದು ಉಕ್ರೇನ್ ಆರೋಪಿಸಿತ್ತು.

ADVERTISEMENT

ಉಕ್ರೇನ್ ನಗರಗಳಾದ ಮರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್‌ಗಳನ್ನು ಪುನಃ ತೆರೆಯಲಾಗುವುದು ಎಂದು ರಷ್ಯಾ ಭಾನುವಾರ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.