ವ್ಲಾಡಿಮಿರ್ ಪುಟಿನ್ ಮತ್ತು ನರೇಂದ್ರ ಮೋದಿ
ಮಾಸ್ಕೊ(ರಷ್ಯಾ): ಮೇ 9ರಂದು ನಡೆಯಲಿರುವ 80ನೇ ‘ವಿಜಯೋತ್ಸವ ಪಥಸಂಚಲನ’ದಲ್ಲಿ ಪಾಲ್ಗೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ರಷ್ಯಾ ಉಪ ವಿದೇಶಾಂಗ ಸಚಿವ ಆ್ಯಂಡ್ರೆ ರುಡೆಂಕೊ ಅವರು ತಿಳಿಸಿದ್ದಾರೆ.
ಎರಡನೇ ವಿಶ್ವಯುದ್ಧದಲ್ಲಿ ಜರ್ಮನಿಯನ್ನು ಸೋಲಿಸಿದ ನೆನಪಿಗಾಗಿ ಪ್ರತಿ ವರ್ಷ ಮೇ 9ರಂದು ವಿಜಯೋತ್ಸವ ಪಥಸಂಚಲನ ಆಯೋಜಿಸಲಾಗುತ್ತದೆ. 75ನೇ ವಿಜಯೋತ್ಸವದ ಪಥಸಂಚಲನದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಭಾಗವಹಿಸಿದ್ದವು.
‘ಮೇ 9ರ ಪಥಸಂಚಲಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಆಹ್ವಾನ ಪತ್ರಿಕೆ ಕಳುಹಿಸಿದ್ದು, ಮಾತುಕತೆ ಪ್ರಗತಿಯಲ್ಲಿದೆ’ ಎಂದು ರುಡೆಂಕೊ ಹೇಳಿಕೆ ಉಲ್ಲೇಖಿಸಿ ರಷ್ಯಾ ಸುದ್ದಿ ಸಂಸ್ಥೆ ‘ಟಾಸ್’ ವರದಿ ಮಾಡಿದೆ.
2024ರ ಜುಲೈನಲ್ಲಿ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ್ದರು. ಈ ವೇಳೆ ಭಾರತಕ್ಕೆ ಆಗಮಿಸುವಂತೆ ಪುಟಿನ್ ಅವರನ್ನು ಆಹ್ವಾನಿಸಿದ್ದರು. ಇದಕ್ಕೆ ಪುಟಿನ್ ಅವರು ಒಪ್ಪಿಗೆ ಸೂಚಿಸಿದ್ದರು.
ಆದರೆ, ಪುಟಿನ್ ಅವರ ಭಾರತ ಭೇಟಿ ದಿನಾಂಕವಿನ್ನೂ ನಿಗದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.