ADVERTISEMENT

ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌ ದಾಳಿ: ವ್ಯಕ್ತಿ ಸಾವು

ಏಜೆನ್ಸೀಸ್
Published 19 ಜುಲೈ 2025, 13:45 IST
Last Updated 19 ಜುಲೈ 2025, 13:45 IST
ಉಕ್ರೇನ್‌ನ ಒಡೆಸಾ ನಗರದ ಮೇಲೆ ರಷ್ಯಾ ನಡೆಸಿದ ಡ್ರೋನ್‌ ದಾಳಿಯಲ್ಲಿ ಅಪಾರ್ಟ್‌ಮೆಂಟ್‌ಗೆ ಹಾನಿಯಾಗಿದೆ     ಎಎಫ್‌ಪಿ ಚಿತ್ರ
ಉಕ್ರೇನ್‌ನ ಒಡೆಸಾ ನಗರದ ಮೇಲೆ ರಷ್ಯಾ ನಡೆಸಿದ ಡ್ರೋನ್‌ ದಾಳಿಯಲ್ಲಿ ಅಪಾರ್ಟ್‌ಮೆಂಟ್‌ಗೆ ಹಾನಿಯಾಗಿದೆ     ಎಎಫ್‌ಪಿ ಚಿತ್ರ   

ಕೀವ್‌ : ಉಕ್ರೇನ್‌ ಮೇಲೆ ರಷ್ಯಾ ನಡೆಸಿದ ಡ್ರೋನ್‌ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

‘300ಕ್ಕೂ ಹೆಚ್ಚು ಡ್ರೋನ್‌ಗಳು ಹಾಗೂ 30ಕ್ಕೂ ಹೆಚ್ಚು ಕ್ರೂಸ್‌ ಕ್ಷಿಪಣಿಗಳಿಂದ ರಷ್ಯಾ ದಾಳಿ ನಡೆಸಿದೆ’ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಒಡೆಸಾದ ಮೇಲೆ ನಡೆದ ದಾಳಿಯಲ್ಲಿ ಮಗು ಸೇರಿದಂತೆ ಆರು ಜನ ಗಾಯಗೊಂಡಿದ್ದಾರೆ. ಸುಮಿ ಪ್ರಾಂತ್ಯದಲ್ಲಿ ಮೂಲಸೌಕರ್ಯಗಳಿಗೆ ಹಾನಿಯಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

‘ರಷ್ಯಾ ಪಡೆಗಳು ಬಂದರು ನಗರ ಒಡೆಸಾ ಮೇಲೆ ನಡೆಸಿದ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ’ ಎಂದು ನಗರದ ಮೇಯರ್‌ ಶನಿವಾರ ತಿಳಿಸಿದ್ದಾರೆ.

ಉಕ್ರೇನ್‌ನ 71 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.