ಮಾಸ್ಕೊ: ಇರಾನ್ ಏನನ್ನು ಕೇಳುತ್ತದೆ ಎಂಬುದರ ಆಧಾರದ ಮೇಲೆ ವಿವಿಧ ರೀತಿಯಲ್ಲಿ ನೆರವು ನೀಡಲು ರಷ್ಯಾ ಸಿದ್ಧವಾಗಿದೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸೋಮವಾರ ಹೇಳಿದ್ದಾರೆ.
ಎಲ್ಲವೂ ಇರಾನ್‌ಗೆ ಏನು ಬೇಕು ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಮಾಧ್ಯಮ ಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಪೆಸ್ಕೋವ್ ಹೇಳಿದ್ದಾರೆ. ನಾವು ನಿರ್ದಿಷ್ಟ ಮಧ್ಯಸ್ಥಿಕೆ ಪ್ರಯತ್ನಗಳ ಆಫರ್ ಅನ್ನು ನೀಡಿದ್ದೇವೆ ಎಂದಿದ್ದಾರೆ.
ಇರಾನ್-ಇಸ್ರೇಲ್ ಯುದ್ಧದ ಬಗ್ಗೆ ರಷ್ಯಾ ತನ್ನ ನಿಲುವನ್ನು ಬಹಿರಂಗವಾಗಿ ಘೋಷಿಸಿದ್ದು, ಇದು ಇರಾನ್‌ಗೆ ನೆರವು ನೀಡಬೇಕಾದ ಪ್ರಮುಖ ಸಮಯ ಎಂದಿದೆ.
ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಅದರಲ್ಲಿ ಇರಾನ್ ಪರ ಬೆಂಬಲ ಘೋಷಿಸಿದ್ದು, ಅದು ಬಹಳ ಮುಖ್ಯವಾದ ಅಭಿವ್ಯಕ್ತಿಯಾಗಿದೆ ಎಂದು ಅವರು ಹೇಳಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಇತ್ತೀಚಿನ ಮಾತುಕತೆಗಳಲ್ಲಿ ಇರಾನ್ ಪ್ರಮುಖ ವಿಷಯವಾಗಿತ್ತು ಎಂದಿದ್ದಾರೆ.
ಅಮೆರಿಕ ಅಧ್ಯಕ್ಷರ ಜೊತೆ ಈ ಹಿಂದೆ ನಡೆದ ಹಲವು ಮಾತುಕತೆಗಳ ವೇಳೆ ಪುಟಿನ್, ಇರಾನ್ ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.