ರೆಸ್ಜೋವ್: ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರಿಗೆ ಗುಂಡೇಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ರಾಜ್ಯ ಖಾತೆ ಸಚಿವ ಜನರಲ್ ವಿ.ಕೆ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.
ಪೋಲೆಂಡ್‌ನ ರೆಸ್ಜೋವ್‌ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಮಾತನಾಡಿರುವ ಅವರು, ‘ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬರಿಗೆ ಗುಂಡಿನೇಟು ಬಿದ್ದಿದೆ ಎಂಬ ಮಾಹಿತಿ ಸಿಕ್ಕಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಇದಕ್ಕೂ ಹಿಂದೆ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಉಕ್ರೇನ್–ರಷ್ಯಾ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡಿದ್ದರು.
ಭಾರತೀಯರೆಲ್ಲರೂ ಸಿಕ್ಕ ಸಾರಿಗೆ ವ್ಯವಸ್ಥೆಯನ್ನು ಬಳಸಿಕೊಂಡು ಕೂಡಲೇ ಉಕ್ರೇನ್ ತೊರೆಯಬೇಕು ಎಂದು ಅಲ್ಲಿನ ಭಾರತೀಯ ರಾಯಭಾರ ಕಚೇರಿ ಈಗಾಗಲೇ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.