ಕೀವ್: ರಷ್ಯಾದ ಆಕ್ರಮಣಕ್ಕೊಳಗಾಗಿರುವ ಉಕ್ರೇನ್‌ನಿಂದ 470 ಮಂದಿ ಭಾರತೀಯರು ಇಂದು (ಶುಕ್ರವಾರ) ರಾತ್ರಿ ಭಾರತಕ್ಕೆ ವಾಪಸಾಗುವ ನಿರೀಕ್ಷೆ ಇದೆ.
470 ಮಂದಿ ವಿದ್ಯಾರ್ಥಿಗಳನ್ನು ಪೊರುಬ್ನೆ–ಸಿರೆತ್ ಗಡಿ ಮೂಲಕ ರೊಮೇನಿಯಾಕ್ಕೆ ಕಳುಹಿಸಿಕೊಡಲಾಗುತ್ತಿದೆ. ಭಾರತೀಯರನ್ನು ತವರಿಗೆ ಕಳುಹಿಸಿಕೊಡುವ ಕಾರ್ಯಾಚರಣೆಯ ಭಾಗವಾಗಿ ಅವರನ್ನು ನೆರೆಯ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದೆ. ಭಾರತೀಯರ ಸ್ಥಳಾಂತರ ಪ್ರಯತ್ನ ನಡೆಯುತ್ತಿದೆ ಎಂದು ಕೀವ್‌ನಲ್ಲಿರುವ ಭಾರತೀಯ ದೂತಾವಾಸ ಕಚೇರಿ ಟ್ವೀಟ್ ಮಾಡಿದೆ.
ಈ ಮಧ್ಯೆ, ಸುಮಾರು 40 ಮಂದಿ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್–ಪೋಲೆಂಡ್ ಗಡಿಯತ್ತ ತೆರಳುತ್ತಿದ್ದು, ಅಲ್ಲಿಂದ ಸ್ವದೇಶಕ್ಕೆ ವಾಪಸಾಗಲಿದ್ದಾರೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.