ADVERTISEMENT

ರಷ್ಯಾ-ಉಕ್ರೇನ್ ಬಿಕ್ಕಟ್ಟು; ಇಂದು ರಾತ್ರಿ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 16:13 IST
Last Updated 24 ಫೆಬ್ರುವರಿ 2022, 16:13 IST
ನರೇಂದ್ರ ಮೋದಿ ಹಾಗೂ ವಾಡ್ಲಿಮಿರ್ ಪುಟಿನ್
ನರೇಂದ್ರ ಮೋದಿ ಹಾಗೂ ವಾಡ್ಲಿಮಿರ್ ಪುಟಿನ್   

ನವದೆಹಲಿ: ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಅಮೆರಿಕ ಹಾಗೂ ಯುರೋಪ್ ಮಿತ್ರರಾಷ್ಟ್ರಗಳ ತೀವ್ರ ವಿರೋಧವನ್ನು ಕಡೆಗಣಿಸಿ ರಷ್ಯಾ, ಗುರುವಾರ ಬೆಳಿಗ್ಗೆ ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಇದರಿಂದ ಯುದ್ಧಪೀಡಿತ ಉಕ್ರೇನ್‌ನಲ್ಲಿ ಅಪಾರ ನಾಶ-ನಷ್ಟ ಉಂಟಾಗಿದೆ.

ADVERTISEMENT

ಈ ಮೊದಲು ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿದ್ದ ಭಾರತೀಯ ವಿದೇಶಾಂಗ ಸಚಿವಾಲಯ, ತಟಸ್ಥ ಧೋರಣೆ ಹಾಗೂ ಶಾಂತಿ ಕಾಪಾಡುವಂತೆ ಕರೆ ನೀಡಿತ್ತು.

ರಷ್ಯಾದಿಂದ ದಾಳಿ ಭೀತಿಯ ನಡುವೆ ಭಾರತದ ಪ್ರಧಾನಿ ಮಧ್ಯ ಪ್ರವೇಶಿಸಿ ಪುಟಿನ್ ಜೊತೆ ಮಾತುಕತೆ ನಡೆಸುವಂತೆ ಉಕ್ರೇನ್ ರಾಯಭಾರಿ ಕಚೇರಿ ಒತ್ತಾಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.