ಕೀವ್: ಯುದ್ಧಪೀಡಿತ ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಜತೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟೊನಿ ಬ್ಲಿಂಕೆನ್ ಹಾಗೂ ‘ಜಿ7’ ರಾಷ್ಟ್ರಗಳ ವಿದೇಶಾಂಗ ಸಚಿವರು ವರ್ಚುವಲ್ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಉಕ್ರೇನ್‌ಗೆ ಎಲ್ಲ ನಾಯಕರು ಒಕ್ಕೊರಲ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಕ್ರಮಣಕ್ಕೆ ರಷ್ಯಾವನ್ನು ಸಂಪೂರ್ಣವಾಗಿ ಹೊಣೆ ಮಾಡಲಾಗುವುದು. ಭದ್ರತೆ, ಆರ್ಥಿಕ ಮತ್ತು ಮಾನವೀಯ ನೆಲೆಯಲ್ಲಿ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಈ ಮಧ್ಯೆ, ರಷ್ಯಾ–ಉಕ್ರೇನ್ ಸಂಘರ್ಷ ಇನ್ನಷ್ಟು ತೀವ್ರಗೊಂಡಿದೆ. ಅಣ್ವಸ್ತ್ರ ಹೊಂದಿರುವ ಪಡೆಗಳನ್ನು ಕಟ್ಟೆಚ್ಚರದಲ್ಲಿ ಇರಿಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೇನೆಗೆ ಭಾನುವಾರ ಆದೇಶಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.