ADVERTISEMENT

ಉಕ್ರೇನ್‌ನಲ್ಲಿ ರಷ್ಯಾ ಜತೆಗಿನ ಸಂಬಂಧದ 11 ರಾಜಕೀಯ ಪಕ್ಷಗಳ ಅಮಾನತು

ಏಜೆನ್ಸೀಸ್
Published 20 ಮಾರ್ಚ್ 2022, 11:11 IST
Last Updated 20 ಮಾರ್ಚ್ 2022, 11:11 IST
ವೊಲೊಡಿಮಿರ್ ಝೆಲೆನ್‌ಸ್ಕಿ 
ವೊಲೊಡಿಮಿರ್ ಝೆಲೆನ್‌ಸ್ಕಿ    

ಕೀವ್: ರಷ್ಯಾ ಜತೆ ಸಂಪರ್ಕವಿರುವ ದೇಶದ 11 ರಾಜಕೀಯ ಪಕ್ಷಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅಮಾನತು ಮಾಡಿ ಆದೇಶಿಸಿದ್ದಾರೆ.

ದೇಶದ ಜನರನ್ನುದ್ದೇಶಿಸಿ ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿ ಅವರು, ‘ಮಾರ್ಷಿಯಲ್‌ ಲಾ’ ಅನ್ವಯ ರಷ್ಯಾ ಜತೆ ಸಂಪರ್ಕವಿಟ್ಟುಕೊಂಡಿದ್ದ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಘೋಷಿಸಿದ್ದಾರೆ.

ದೇಶದ ಸಂಸತ್ತಿನಒಟ್ಟಾರೆ 450 ಸದಸ್ಯರ ಪೈಕಿ 44 ಸದಸ್ಯರನ್ನು ಹೊಂದಿರುವ ಪ್ರತಿಪಕ್ಷ ಸೇರಿದಂತೆ ಇತರ ಪಕ್ಷಗಳನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.