ADVERTISEMENT

ರಷ್ಯಾ-ಉಕ್ರೇನ್ ಸಂಘರ್ಷ ಇತ್ಯರ್ಥಕ್ಕೆ ಬಹಳ ಹತ್ತಿರದಲ್ಲಿದ್ದೇವೆ: ಟ್ರಂಪ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2026, 5:58 IST
Last Updated 6 ಫೆಬ್ರುವರಿ 2026, 5:58 IST
<div class="paragraphs"><p>ಡೊನಾಲ್ಡ್ ಟ್ರಂಪ್</p></div>

ಡೊನಾಲ್ಡ್ ಟ್ರಂಪ್

   

(ಪಿಟಿಐ ಚಿತ್ರ)

ಕೀವ್: 'ರಷ್ಯಾ ಮತ್ತು ಉಕ್ರೇನ್ ನಡುವಣ ಸಂಘರ್ಷವನ್ನು ಇತ್ಯರ್ಥಗೊಳಿಸಲು ನಾವು ಬಹಳ ಹತ್ತಿರದಲ್ಲಿದ್ದೇವೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ADVERTISEMENT

'ನಾವು ರಷ್ಯಾ ಹಾಗೂ ಉಕ್ರೇನ್ ಜೊತೆ ಮಾತುಕತೆಯಲ್ಲಿದ್ದೇವೆ. ಯುದ್ಧವನ್ನು ಕೊನೆಗೊಳಿಸಲು ಕಠಿಣ ಪ್ರಯತ್ನ ನಡೆಸುತ್ತಿದ್ದೇವೆ. ಬಹಳ ಹತ್ತಿರದಲ್ಲಿದ್ದೇವೆ' ಎಂದು ಟ್ರಂಪ್ ತಿಳಿಸಿದ್ದಾರೆ.

ಉನ್ನತ ಮಟ್ಟದ ಮಿಲಿಟರಿ ಮಾತುಕತೆ...

ಉಕ್ರೇನ್ ಸಂಘರ್ಷ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಮಿಲಿಟರಿ ಮಾತುಕತೆ ನಡೆಸಲು ಅಮೆರಿಕ ಹಾಗೂ ರಷ್ಯಾ ಒಪ್ಪಿಕೊಂಡಿವೆ ಎಂದು ವರದಿಯಾಗಿವೆ.

2022ರಲ್ಲಿ ಉಕ್ರೇನ್ ಮೇಲೆ ರಷ್ಯಾ ಪೂರ್ಣ ಪ್ರಮಾಣದ ಯುದ್ಧ ಆರಂಭಿಸಿತ್ತು. ಟ್ರಂಪ್ ಎರಡನೇ ಅವಧಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಉಭಯ ರಾಷ್ಟ್ರಗಳ ನಡುವಣ ಉದ್ವಿಗ್ನತೆ ಶಮನಗೊಳಿಸಲು ಯತ್ನಿಸುತ್ತಿದ್ದಾರೆ.

ಉಕ್ರೇನ್‌ನ 55 ಸಾವಿರ ಯೋಧರ ಸಾವು: ಝೆಲೆನ್‌ಸ್ಕಿ

ರಷ್ಯಾ ಆಕ್ರಮಣದ ನಂತರ ನಮ್ಮ 55 ಸಾವಿರ ಯೋಧರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.