
ಪ್ರಜಾವಾಣಿ ವಾರ್ತೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ
ಮಿಯಾಮಿ: ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಪ್ರಸ್ತಾಪಿಸಿರುವ ಯೋಜನೆಯ ಭಾಗವಾಗಿ ಶಾಂತಿ ಮಾತುಕತೆಯು ಪ್ರಗತಿಯಲ್ಲಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.
ಹಲವು ದಿನಗಳಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ನಡೆಸುತ್ತಿರುವ ಪ್ರಯತ್ನದ ಭಾಗವಾಗಿ ಫ್ಲಾರಿಡಾದಲ್ಲಿ ಮಾತುಕತೆ ನಡೆಯುತ್ತಿದೆ.
ರಷ್ಯಾ ರಾಯಭಾರಿಯು ಟ್ರಂಪ್ ಅವರ ರಾಯಭಾರಿ ತಂಡವನ್ನು ಭೇಟಿ ಮಾಡಿದ್ದಾರೆ ಎಂದು ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ವರದಿ ಮಾಡಿದೆ.
‘ಫ್ಲಾರಿಡಾದಲ್ಲಿರುವ ನಮ್ಮ ತಂಡ ಅಮೆರಿಕದ ತಂಡದೊಂದಿಗೆ ಮಾತುಕತೆ ನಡೆಸುತ್ತಿದೆ. ಶೀಘ್ರದಲ್ಲಿ ಮುಂದುವರಿಯುತ್ತೇವೆ’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಭಾನುವಾರ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.