ADVERTISEMENT

Russia-Ukraine Conflict: ಟ್ರಂಪ್-ಪುಟಿನ್ ನಡುವೆ ಎರಡು ಗಂಟೆಗೂ ಅಧಿಕ ಸಂಭಾಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಅಕ್ಟೋಬರ್ 2025, 2:11 IST
Last Updated 17 ಅಕ್ಟೋಬರ್ 2025, 2:11 IST
<div class="paragraphs"><p>ಡೊನಾಲ್ಡ್ ಟ್ರಂಪ್,&nbsp;ವ್ಲಾಡಿಮಿರ್ ಪುಟಿನ್</p></div>

ಡೊನಾಲ್ಡ್ ಟ್ರಂಪ್, ವ್ಲಾಡಿಮಿರ್ ಪುಟಿನ್

   

ವಾಷಿಂಗ್ಟನ್: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ದೂರವಾಣಿ ಕರೆ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಎರಡು ಗಂಟೆಗೂ ಅಧಿಕ ಸಂಭಾಷಣೆ ನಡೆಸಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರ ಭೇಟಿಗೂ ಮುನ್ನ ಪುಟಿನ್ ಜೊತೆ ಟ್ರಂಪ್ ಮಾತುಕತೆ ನಡೆಸಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮ 'ಟ್ರುಥ್‌'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

'ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಫಲಪ್ರದವಾಗಿತ್ತು. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗಾಗಿ ನನ್ನನ್ನು ಹಾಗೂ ಅಮೆರಿಕವನ್ನು ಅಭಿನಂದಿಸಿದ್ದಾರೆ. ಇದು ಅವರ ಶತಮಾನಗಳ ಕನಸಾಗಿತ್ತು' ಎಂದು ತಿಳಿಸಿದ್ದಾರೆ.

'ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಿರುವುದು ರಷ್ಯಾ ಹಾಗೂ ಉಕ್ರೇನ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ಸಹಾಯಕವಾಗಲಿದೆ ಎಂಬ ನಂಬಿಕೆ ನನಗಿದೆ' ಎಂದು ಟ್ರಂಪ್ ತಿಳಿಸಿದ್ದಾರೆ.

'ಉಕ್ರೇನ್ ವಿರುದ್ಧದ ಯುದ್ಧ ಕೊನೆಗೊಂಡ ಬಳಿಕ ಅಮೆರಿಕ-ರಷ್ಯಾ ವ್ಯಾಪಾರ ಒಪ್ಪಂದದ ಸಾಧ್ಯತೆಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ' ಎಂದು ಹೇಳಿದ್ದಾರೆ.

'ಮುಂದಿನ ವಾರ ಉನ್ನತ ಮಟ್ಟದ ಸಲಹೆಗಾರರ ಸಭೆ ನಡೆಯಲಿದೆ. ಉಕ್ರೇನ್ ಯುದ್ಧ ಕೊನೆಗಾಣಿಸಲು ನಾನು ಹಾಗೂ ಪುಟಿನ್ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭೇಟಿಯಾಗಲು ಒಪ್ಪಿಕೊಂಡಿದ್ದೇವೆ' ಎಂದು ತಿಳಿಸಿದ್ದಾರೆ.

'ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರನ್ನು ನಾನು ನಾಳೆ ಓವಲ್ ಕಚೇರಿಯಲ್ಲಿ ಭೇಟಿಯಾಗಲಿದ್ದೇನೆ. ಅಲ್ಲಿ ಪುಟಿನ್ ಜೊತೆ ಸಂಭಾಷಣೆ ಕುರಿತಾಗಿಯೂ ಚರ್ಚಿಸಲಿದ್ದೇವೆ' ಎಂದು ಟ್ರಂಪ್ ತಿಳಿಸಿದ್ದಾರೆ.

ಏತನ್ಮಧ್ಯೆ ಟ್ರಂಪ್ ಹಾಗೂ ಪುಟಿನ್ ನಡುವೆ ಎರಡು ತಾಸಿಗೂ ಅಧಿಕ ಕಾಲ ಮಾತುಕತೆ ನಡೆದಿದೆ ಎಂದು ಶ್ವೇತಭವನ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.