
ಕೀವ್: ಅಮೆರಿಕ ಮಧ್ಯಸ್ಥಿಕೆಯಲ್ಲಿ ರಷ್ಯಾ ಮತ್ತು ಉಕ್ರೇನ್ ನಿಯೋಗಗಳ ನಡುವಿನ ಮತ್ತೊಂದು ಸುತ್ತಿನ ಮಾತುಕತೆಯು ಫೆ.4 ಮತ್ತು 5ರಂದು ನಡೆಯಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಭಾನುವಾರ ತಿಳಿಸಿದರು.
‘ಉಕ್ರೇನ್ ಮೇಲಿನ ರಷ್ಯಾದ ಸಂಪೂರ್ಣ ಆಕ್ರಮಣವನ್ನು ಕೊನೆಗೊಳಿಸುವುದು ಮಾತುಕತೆಯ ಉದ್ದೇಶವಾಗಿದೆ. ರಷ್ಯಾ, ಉಕ್ರೇನ್ ಹಾಗೂ ಅಮೆರಿಕದ ತ್ರಿಪಕ್ಷೀಯ ಸಭೆಯು ಅಬುಧಾಬಿಯಲ್ಲಿ ನಡೆಯಲಿದೆ. ಅರ್ಥಪೂರ್ಣ ಮಾತುಕತೆಗೆ ಉಕ್ರೇನ್ ಸಿದ್ಧವಾಗಿದೆ. ಯುದ್ಧವನ್ನು ಕೊನೆಗೊಳಿಸಲು ಎದುರು ನೋಡುತ್ತಿದ್ದೇವೆ’ ಎಂದು ಹೇಳಿದರು.
ಈ ಬಗ್ಗೆ ಅಮೆರಿಕ ಹಾಗೂ ರಷ್ಯಾದ ಅಧಿಕಾರಿಗಳು ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಅಮೆರಿಕದ ಶಾಂತಿಪಾಲನಾ ನಿಯೋಗದೊಂದಿಗೆ ಮಾತುಕತೆ ನಡೆಸಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಿಶೇಷ ರಾಯಭಾರಿ ಕಿರಿಲ್ ಡಿಮಿಟ್ರಿವ್ ಅವರು ಶನಿವಾರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.