ಮಾಸ್ಕೋ: ಉಕ್ರೇನ್‌ನಲ್ಲಿ ನಡೆಯುತ್ತಿರುವ ರಷ್ಯಾದ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲು ಸರ್ಕಾರ ಆದೇಶ ನೀಡಿದೆ.
ಬೆಲಾರಸ್‌ನಲ್ಲಿ ಮಾತುಕತೆ ನಡೆಸಲು ಉಕ್ರೇನ್ ನಿರಾಕರಿಸಿದೆ ಎನ್ನಲಾಗಿದೆ. ಹೀಗಾಗಿ ಆಕ್ರಮಣವನ್ನು ಎಲ್ಲಾ ದಿಕ್ಕುಗಳಿಂದಲೂ ತೀವ್ರಗೊಳಿಸುವಂತೆ ರಷ್ಯಾದ ಸೈನ್ಯಕ್ಕೆ ಆದೇಶ ನೀಡಲಾಗಿದೆ ಎಂದು ಮಾಸ್ಕೋದ ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಉಕ್ರೇನ್ ಮಾತುಕತೆಗೆ ಬರುತ್ತಿಲ್ಲ ಎಂದು ರಷ್ಯಾ ಹೇಳಿತ್ತು. ಆದರೆ, ರಷ್ಯಾದ ಆರೋಪವನ್ನು ಉಕ್ರೇನ್ ನಿರಾಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.