ಉಕ್ರೇನ್ ಮೇಲೆ ರಷ್ಯಾ ದಾಳಿ
ಕೀವ್: ಉಕ್ರೇನ್ ಮೇಲೆ ರಷ್ಯಾ ನೂರಾರು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸಿದ್ದು, ಶುಕ್ರವಾರ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ.
ರಷ್ಯಾ ಪಡೆಗಳು 597 ಡ್ರೋನ್ ಮತ್ತು 26 ಕ್ಷಿಪಣಿಗಳಿಂದ ದಾಳಿ ನಡೆಸಿವೆ. ಅದರಲ್ಲಿ 319 ಡ್ರೋನ್ ಮತ್ತು 25 ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ. ರೇಡಾರ್‌ಗಳ ಕಣ್ತಪ್ಪಿಸಿ ಕಾರ್ಯಾಚರಣೆ ನಡೆಸುವ 258 ಡ್ರೋನ್‌ಗಳನ್ನು ಕೂಡ ನಾಶ ಮಾಡಲಾಗಿದೆ ಎಂದು ಉಕ್ರೇನ್ ವಾಯುಪಡೆ ತಿಳಿಸಿದೆ.
ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಉಕ್ರೇನ್‌ನ 33 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾ ರಕ್ಷಣಾ ಸಚಿವಾಲಯ ಹೇಳಿದೆ.
ಉಕ್ರೇನ್ ಸೇನೆಯನ್ನು ಒತ್ತಡಕ್ಕೆ ಸಿಲುಕಿಸುವ ಸಲುವಾಗಿ ರಷ್ಯಾ ನಿರಂತರ ದಾಳಿ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.