ಮಾಸ್ಕೊ : ರಷ್ಯಾದ ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸದಸ್ಯರೂ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಡಳಿತವನ್ನು ತಮ್ಮ ಹತೋಟಿಗೆ ತೆಗೆದುಕೊಂಡಿದ್ದಾರೆ.
ಪ್ರಧಾನಿ ಮತ್ತು ಸಂಪುಟದ ಸದಸ್ಯರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಂಸತ್ತಿಗೆ ನೀಡುವುದೂ ಸೇರಿದಂತೆ ಕೆಲ ಮಹತ್ವದ ಸಾಂವಿಧಾನಿಕ ಸುಧಾರಣಾ ಕ್ರಮಗಳನ್ನು ಪುಟಿನ್ ಪ್ರಸ್ತಾಪಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪ್ರಸ್ತುತ ಪ್ರಧಾನಿ ಮತ್ತು ಸಂಪುಟ ಸದಸ್ಯರ ಆಯ್ಕೆಯ ಅಧಿಕಾರ ಅಧ್ಯಕ್ಷರಿಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.