ADVERTISEMENT

ಭಾರತ–ರಷ್ಯಾ ವಿದೇಶಾಂಗ ಸಚಿವರ ಸಭೆ

ರಾಯಿಟರ್ಸ್
Published 26 ಡಿಸೆಂಬರ್ 2023, 12:53 IST
Last Updated 26 ಡಿಸೆಂಬರ್ 2023, 12:53 IST
ಎಸ್‌.ಜೈಶಂಕರ್‌
ಎಸ್‌.ಜೈಶಂಕರ್‌   

ಮಾಸ್ಕೊ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಮತ್ತು ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸರ್ಗೆ ಲಾವ್ರೊ ಅವರು ಮಾಸ್ಕೊದಲ್ಲಿ ಬುಧವಾರ ಮಾತುಕತೆ ನಡೆಸಲಿದ್ದಾರೆ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಒಪ್ಪಂದ, ಉಕ್ರೇನ್‌ ಮತ್ತು ಗಾಜಾ ಸಂಘರ್ಷ ಹಾಗೂ ಬ್ರಿಕ್ಸ್ ಗುಂಪಿಗೆ ಸಂಬಂಧಿಸಿದ ವಿಚಾರಗಳ ಕುರಿತು ಸಂವಾದ ನಡೆಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT