ADVERTISEMENT

ಉಕ್ರೇನ್‌: ಅಪಾರ್ಟ್‌ಮೆಂಟ್‌ ಮೇಲೆ ರಷ್ಯಾ ಕ್ಷಿಪಣಿ ದಾಳಿ, ಒಬ್ಬ ಸಾವು

ಏಜೆನ್ಸೀಸ್
Published 14 ಮಾರ್ಚ್ 2023, 16:01 IST
Last Updated 14 ಮಾರ್ಚ್ 2023, 16:01 IST
ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಅಪಾರ್ಟ್‌ಮೆಂಟ್‌ ಸಮುಚ್ಚಯ –ಎಪಿ/ಪಿಟಿಐ ಚಿತ್ರ
ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಅಪಾರ್ಟ್‌ಮೆಂಟ್‌ ಸಮುಚ್ಚಯ –ಎಪಿ/ಪಿಟಿಐ ಚಿತ್ರ   

ಕೀವ್‌: ‘ಉಕ್ರೇನ್‌ನ ಪೂರ್ವ ಡೊನೆಟ್ಸ್ಕ್‌ ಪ್ರಾಂತ್ಯದ ಕ್ರಾಮಾಟೋರ್‌ಸ್ಕ್‌ನ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಮೇಲೆ ಮಂಗಳವಾರ ರಷ್ಯಾ ಮತ್ತೆ ಕ್ಷಿಪಣಿ ದಾಳಿ ನಡೆಸಿದ್ದು, ಒಬ್ಬ ವ್ಯಕ್ತಿ ಸತ್ತು, ಮೂವರು ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸ್ಫೋಟದಿಂದಾಗಿ ಆರು ಕಟ್ಟಡಗಳಿಗೆ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ’ ಎಂದು ಹೇಳಿರುವ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೇಲನ್‌ಸ್ಕಿ, ಸ್ಫೋಟದಿಂದಾಗಿ ಉಂಟಾಗಿರುವ ಹಾನಿಯನ್ನು ತೋರಿಸುವ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT