ಕೀವ್: ಉಕ್ರೇನ್‌ನ ಪೂರ್ವ ಭಾಗದ ಹಾರ್ಕೀವ್ ಸಹಿತ ಕೆಲವು ಪ್ರದೇಶಗಳ ಮೇಲೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಿಂದ ಐವರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಷ್ಯಾ ಪಡೆಗಳು ಕಳೆದ ಫೆಬ್ರವರಿಯಲ್ಲಿ ಈಶಾನ್ಯ ಹಾರ್ಕಿವ್ ಪ್ರದೇಶದ ದೊಡ್ಡ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದವು. ಆದರೆ ಉಕ್ರೇನ್ ಆಗಸ್ಟ್‌ನಲ್ಲಿ ಪ್ರತಿದಾಳಿಯನ್ನು ಪ್ರಾರಂಭಿಸಿ ರಷ್ಯಾ ಆಕ್ರಮಿಸಿಕೊಂಡ ಹಲವು ಭಾಗಗಳನ್ನು ವಾಪಸ್ ಪಡೆದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.