ADVERTISEMENT

ವಿಶ್ವಸಂಸ್ಥೆ: ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಜೈಶಂಕರ್ -ಗುಟೆರಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಡಿಸೆಂಬರ್ 2022, 2:15 IST
Last Updated 20 ಡಿಸೆಂಬರ್ 2022, 2:15 IST
ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. (ಟ್ವಿಟರ್ ಚಿತ್ರ)
ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. (ಟ್ವಿಟರ್ ಚಿತ್ರ)   

ವಿಶ್ವಸಂಸ್ಥೆ: ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಮಹಾತ್ಮ ಗಾಂಧಿಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಲಾಗಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.ಜೈಶಂಕರ್ ಮತ್ತು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.

ವಿಶ್ವಸಂಸ್ಥೆಯ ಉತ್ತರ ಲಾನ್ ಗಾರ್ಡನ್ಸ್‌ನಲ್ಲಿ ಶಾಶ್ವತವಾಗಿ ನೆಲೆಗೊಂಡಿರುವ ಗಾಂಧೀಜಿಯವರ ಮೊದಲ ಪ್ರತಿಮೆ ಇದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.