
ಡೇಟನ್: ಓಹಿಯೋದಲ್ಲಿ ಭಾನುವಾರ ನಡೆದ ‘ಡೇಟನ್ ಸಾಹಿತ್ಯ ಶಾಂತಿ ಪ್ರಶಸ್ತಿ ಸಮಾರಂಭ’ದಲ್ಲಿ ಭಾರತೀಯ ಸಂಜಾತ, ಲೇಖಕ ಸಲ್ಮಾನ್ ರಶ್ದಿ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಮೂರು ವರ್ಷಗಳ ಹಿಂದೆ ನ್ಯೂಯಾರ್ಕ್ ನಗರದಲ್ಲಿ ನಡೆದಿದ್ದ ಉಪನ್ಯಾಸ ಕಾರ್ಯಕ್ರಮದ ವೇದಿಕೆಯಲ್ಲಿ ರಶ್ದಿ ಅವರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ್ದ. ಈ ವೇಳೆ ರಶ್ದಿ ಬಲಗಣ್ಣನ್ನು ಕಳೆದುಕೊಂಡಿದ್ದರು. ಈ ಘಟನೆ ಬಳಿಕ ಅವರು ಕಾದಂಬರಿಯನ್ನು ಪ್ರಕಟಿಸಿದ ನಂತರ ‘ಜೀವಮಾನ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಿದ್ದಾರೆ.
ಸೃಜನಶೀಲ, ಸೃಜನೇತರ ಸಾಹಿತ್ಯ ಹಾಗೂ ಜೀವಮಾನದ ಸಾಧನೆಗಾಗಿ ಪ್ರತ್ಯೇಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲಾಗುತ್ತದೆ. ಸಾಹಿತ್ಯಿಕ ಅರ್ಹತೆ ಹೊಂದಿದ ಮತ್ತು ತಮ್ಮ ಕೆಲಸದ ಮೂಲಕ ಶಾಂತಿಯನ್ನು ಉತ್ತೇಜಿಸುವ ಬರಹಗಾರರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.