ADVERTISEMENT

ದಕ್ಷಿಣ ಆಫ್ರಿಕಾ ಅಧ್ಯಕ್ಷರಾಗಿ ಸಿರಿಲ್ ಪ್ರಮಾಣ

ಪಿಟಿಐ
Published 25 ಮೇ 2019, 17:34 IST
Last Updated 25 ಮೇ 2019, 17:34 IST

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ಅಧ್ಯಕ್ಷರಾಗಿ ಸಿರಿಲ್ ರಾಮಫೊಸಾ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಆಫ್ರಿಕನ್‌ ನ್ಯಾಷನಲ್‌ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದ ಬಳಿಕ ಅದರ ಮುಖ್ಯಸ್ಥರಾಗಿದ್ದ 66 ವರ್ಷದ ಸಿರಿಲ್‌ ಅವರು ಅಧ್ಯಕ್ಷರಾಗಿ ಸಂಸತ್‌ನಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಲಾಫ್ಟಸ್‌ ವರ್ಸ್ಫೆಲ್ಡ್ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.