ADVERTISEMENT

ಹಜ್ ಯಾತ್ರೆ: 10 ಲಕ್ಷ ಯಾತ್ರಾರ್ಥಿಗಳಿಗೆ ಅವಕಾಶ

ಸೌದಿ ಅರೇಬಿಯಾ ಘೋಷಣೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 13:27 IST
Last Updated 9 ಏಪ್ರಿಲ್ 2022, 13:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಿಯಾದ್: ಈ ವರ್ಷ ಅನ್ಯ ದೇಶಗಳ 10 ಲಕ್ಷ ಯಾತ್ರಾರ್ಥಿಗಳಿಗೆ ಹಜ್ ಯಾತ್ರೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶ ನೀಡಲು ಸೌದಿ ಅರೇಬಿಯಾ ಸರ್ಕಾರ ಮುಂದಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮವೊಂದು ವರದಿ ಮಾಡಿದೆ.

ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎರಡು ವರ್ಷಗಳಿಂದ ಕಠಿಣ ನಿರ್ಬಂಧಗಳನ್ನು ಹೇರಲಾಗಿತ್ತು. ಕಳೆದ ವರ್ಷ ಕೇವಲ 60 ಸಾವಿರ ಮಂದಿಗೆ ಹಜ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ, ಈ ವರ್ಷ ಸೋಂಕು ನಿಯಂತ್ರಣಕ್ಕೆ ಬಂದಿರುವ ಕಾರಣ ಹತ್ತು ಲಕ್ಷ ಮಂದಿಗೆ ಅವಕಾಶ ನೀಡಲಾಗುತ್ತಿದೆ.

ಈ ವರ್ಷ ಮೆಕ್ಕಾಗೆ ಬರಲು ಬಯಸುವವರು 65 ವರ್ಷ ಒಳಗಿನವರಾಗಿರಬೇಕು. ಕೊರೊನಾ ಲಸಿಕೆ ಪಡೆದಿರಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ ಎಂದು ಹಜ್ ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.