ADVERTISEMENT

ಸೌದಿ ಅರೇಬಿಯಾ: ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

ಏಜೆನ್ಸೀಸ್
Published 21 ಡಿಸೆಂಬರ್ 2020, 5:33 IST
Last Updated 21 ಡಿಸೆಂಬರ್ 2020, 5:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರವನ್ನು ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ.

ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ. ವೈರಸ್‌ನ ಸ್ವರೂಪದ ಬಗ್ಗೆ ವೈದ್ಯಕೀಯ ಮಾಹಿತಿ ಲಭ್ಯವಾಗುವವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯ ಮೇಲಿನ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆಯಿದೆ’ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ತಿಳಿಸಿದೆ.

ಅಷ್ಟೆ ಅಲ್ಲದೆ ಸೌದಿ ಅರೇಬಿಯಾವು ಭೂ ಮತ್ತು ಜಲ ಮಾರ್ಗಗಳನ್ನು ಒಂದು ವಾರದವರೆಗೆ ಮುಚ್ಚಿದೆ. ಕಳೆದ ಮೂರು ತಿಂಗಳಲ್ಲಿ ಐರೋ‍ಪ್ಯ ರಾಷ್ಟ್ರಗಳಿಂದ ಬಂದವರು ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು ಎಂದು ಸರ್ಕಾರ ಆದೇಶಿಸಿದೆ.

ADVERTISEMENT

ಆದರೆ ಸರಕು ಸಾಗಣೆ ವಿಮಾನ ಸೇವೆಗಳು ಎಂದಿನಂತೆ ಇರಲಿವೆ ಎಂದು ಸಚಿವಾಲಯವು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.