ADVERTISEMENT

ಜಲ್ಲಿಕಟ್ಟು ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಜಲ್ಲಿಕಟ್ಟು ಕ್ರೀಡೆಗೆ ತಮಿಳುನಾಡು ಸರ್ಕಾರದಿಂದ ಅವಕಾಶ

ಪಿಟಿಐ
Published 8 ಡಿಸೆಂಬರ್ 2022, 15:55 IST
Last Updated 8 ಡಿಸೆಂಬರ್ 2022, 15:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಜಲ್ಲಿಕಟ್ಟುಕ್ರೀಡೆಗೆ ತಮಿಳುನಾಡು ಸರ್ಕಾರ ಮತ್ತು ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಮಹಾರಾಷ್ಟ್ರ ಸರ್ಕಾರ ಅವಕಾಶ ಕಲ್ಪಿಸಿರುವುದನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪೀಠವು, ತಮಿಳುನಾಡು ಸರ್ಕಾರ ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಮುಕುಲ್‌ ರೋಹಟಗಿ ಸೇರಿ, ಈ ವಿಷಯ ಸಂಬಂಧ ಸಲ್ಲಿಕೆಯಾಗಿರುವ ಇತರರ ಅರ್ಜಿಗಳ ಪರ ವಕೀಲರ ವಾದಗಳನ್ನು ಆಲಿಸಿತು.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್‌, ಹೃಷಿಕೇಶ್‌ ರಾಯ್‌, ಸಿ.ಟಿ. ರವಿಕುಮಾರ್‌ ಅವರು ಇರುವ ಸಾಂವಿಧಾನಿಕ ಪೀಠವು,ಒಂದು ವಾರದೊಳಗೆ ಲಿಖಿತವಾಗಿ ತಮ್ಮ ಸಮಗ್ರವಾದ ಕ್ರೋಡಿಕೃತ ಅಹವಾಲನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.