ಲಂಡನ್: ಬ್ರಿಟನ್‌ನ ಉತ್ತರ ಭಾಗಕ್ಕೆ ತೀವ್ರ ಅಪಾಯಕಾರಿ ವೇಗದಲ್ಲಿ ಬೀಸುತ್ತಿರುವ ಬಿರುಗಾಳಿ ಅಪ್ಪಳಿಸಿದೆ. ಭಾರಿ ಮಳೆ ಹಾಗೂ ಗಾಳಿಯಿಂದ ಜನರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಸ್ಕಾಟ್ಲೆಂಡ್‌ನಲ್ಲಿ ರೈಲು ಸಂಚಾರವನ್ನು ರದ್ದು ಮಾಡಲಾಗಿದೆ. ಉದ್ಯಾನಗಳನ್ನೂ ಬಂದ್ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಹವಾಮಾನ ಇಲಾಖೆಯು ಸ್ಕಾಟ್ಲೆಂಡ್‌ನಲ್ಲಿ ಬಿರುಗಾಳಿಯ ಎಚ್ಚರಿಕೆ ನೀಡಿದೆ. ಭಾರಿ ಗಾಳಿಯಿಂದಾಗಿ ಜನರ ಜೀವ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಮಳೆಯೊಂದಿಗೆ ಗಂಟೆಗೆ 137 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.