ಪ್ರವಾಹ (ಪ್ರಾತಿನಿಧಿಕ ಚಿತ್ರ)
ಜಕಾರ್ತ: ಇಂಡೊನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ ಪ್ರವಾಹ ಹಾಗೂ ಭೂಕುಸಿತದ ಪರಿಣಾಮ ಕಾಣೆಯಾಗಿರುವವರ ಪತ್ತೆಗಾಗಿ ಬುಧವಾರ ಶೋಧ ಕಾರ್ಯ ಮುಂದುವರಿದಿದೆ. ಈ ಅವಘಡದಲ್ಲಿ ಮೃತರ ಸಂಖ್ಯೆ 19ಕ್ಕೆ ಏರಿದೆ.
ಪ್ರವಾಹದಿಂದಾಗಿ, ಜಾವಾ ದ್ವೀಪದಾದ್ಯಂತ ಒಟ್ಟು 25 ಮನೆಗಳು ಕುಸಿದಿವೆ. ಒಂದು ಅಣೆಕಟ್ಟು ಒಡೆದಿದ್ದು, ಮೂರು ಪ್ರಮುಖ ಸೇತುವೆಗಳು ಕೊಚ್ಚಿ ಹೋಗಿವೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
13 ಮಂದಿ ಗಾಯಗೊಂಡಿದ್ದು, 300ಕ್ಕೂ ಹೆಚ್ಚು ಜನರನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನೂ 7 ಮಂದಿ ಕಾಣೆಯಾಗಿದ್ದು, ಹುಡುಕಾಟ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ. ಭಾರಿ ಮಳೆ ಹಾಗೂ ದಟ್ಟ ಮಂಜಿನಿಂದಾಗಿ ರಕ್ಷಣಾ ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಜಾವಾ ದ್ವೀಪದಲ್ಲಿ ಸೋಮವಾರದಿಂದ ಭಾರಿ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಪರ್ವತ ಪ್ರದೇಶದ ಕುಗ್ರಾಮಗಳಲ್ಲಿ ಭೂಕುಸಿತ ಉಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.