ಸಿಯಾಟಲ್ (ನ್ಯೂಯಾರ್ಕ್): ಗಸ್ತುವಾಹನದ ಅಪಘಾತದಿಂದಾಗಿ 2023 ಜನವರಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಕಾರಣರಾಗಿದ್ದ ಸಿಯಾಟಲ್‌ನ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಆಂಧ್ರಪ್ರದೇಶದ ಜಾಹ್ನವಿ ಕಂದುಲ ಅವರು ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರು ಚಲಾಯಿಸುತ್ತಿದ್ದ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.
ಡೇವ್ ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ಸಿಯಾಟಲ್ ಟೈಮ್ಸ್’ ಸೋಮವಾರ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.