ಕಠ್ಮಂಡು: ನೇಪಾಳದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದಾಗಿ ಏಳು ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ.
ಬಗ್ಲಂಗ್ ಜಿಲ್ಲೆಯಲ್ಲಿ ನಾಲ್ಕು ಮತ್ತು ಪಶ್ಚಿಮ ರುಕ್ಮಾ ಮತ್ತು ಪಲ್ಪಾ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಮುಂದಿನ ಮೂರು ದಿನ ನೇಪಾಳದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.