ಸಾಂಕೇತಿಕ ಚಿತ್ರ
ರಾಯಿಟರ್ಸ್
ಕಠ್ಮಂಡು: ಪಶ್ಚಿಮ ನೇಪಾಳದ ಬಗ್ಲುಂಗ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಬಗ್ಲುಂಗ್ ಜಿಲ್ಲೆಯ ಬಡಿಗಡ್ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಈ ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಪೀಡಿತ ಪ್ರದೇಶದಲ್ಲಿನ ಜನರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜುಲೈ12ರಂದು ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್–ಮುಗಲಿಂಗ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ಎರಡು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಏಳು ಭಾರತೀಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.