ADVERTISEMENT

ಪಾಕಿಸ್ತಾನ | 2 ಪ್ರತ್ಯೇಕ ಭಯೋತ್ಪಾದಕ ದಾಳಿ: 7 ಭದ್ರತಾ ಸಿಬ್ಬಂದಿ ಸಾವು

ಪಿಟಿಐ
Published 12 ಮೇ 2024, 8:03 IST
Last Updated 12 ಮೇ 2024, 8:03 IST
   

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 7 ಭದ್ರತಾ ಸಿಬ್ಬಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜಿರಿಸ್ತಾನ್ ಜಿಲ್ಲೆಯ ಹಸನ್ ಖೇಲ್ ಪ್ರದೇಶದಲ್ಲಿ ಶನಿವಾರ ಬಾಂಬ್ ವಿಲೇವಾರಿ ಘಟಕವನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಅದೇ ಜಿಲ್ಲೆಯ ಸೀಮಾನ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ .

ADVERTISEMENT

ಭದ್ರತಾ ಸಿಬ್ಬಂದಿ ಶವ ಮತ್ತು ಗಾಯಾಳುಗಳನ್ನು ವಿಮಾನದ ಮೂಲಕ ಬನ್ನುವಿನಲ್ಲಿನ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.