ಕ್ರಿವಿ ರಿಹ್ ಮೇಲೆ ರಷ್ಯಾ ಕ್ಷಿಪಣಿ ದಾಳಿ
(ಚಿತ್ರ ಕೃಪೆ– @ZelenskyyUa)
ಉಕ್ರೇನ್(ಕೀವ್): ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರ ಹುಟ್ಟೂರು ಮಧ್ಯ ಉಕ್ರೇನ್‌ನ ಕ್ರಿವಿ ರಿಹ್ ನಗರದ ಮೇಲೆ ಶುಕ್ರವಾರ ರಷ್ಯಾದ ಕ್ಷಿಪಣಿ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ 14 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಿಪಣಿ ವಸತಿ ಪ್ರದೇಶಕ್ಕೆ ಅಪ್ಪಳಿಸಿತು. ಸಮೀಪದಲ್ಲಿ ಆಟದ ಮೈದಾನವೂ ಇತ್ತು. ಮೃತರಲ್ಲಿ ಐವರು ಮಕ್ಕಳೂ ಸೇರಿದ್ದಾರೆ ಎಂದು ಕ್ರಿವಿ ರಿಹ್‌ನ ರಕ್ಷಣಾ ಮಂಡಳಿಯ ಮುಖ್ಯಸ್ಥ ಓಲೆಕ್ಸಾಂಡರ್ ವಿಲ್ಕುಲ್ ಹೇಳಿದ್ದಾರೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ರಷ್ಯಾಕ್ಕೆ ಕದನ ವಿರಾಮ ಬೇಕಿಲ್ಲ. ನಾವು ಅದನ್ನು ನೋಡುತ್ತಿದ್ದೇವೆ' ಎಂದು ಝೆಲೆನ್‌ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.