ADVERTISEMENT

ಪಾಕಿಸ್ತಾನದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 33 ಸಾವು

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 9:05 IST
Last Updated 7 ಜೂನ್ 2021, 9:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಎರಡು ಪ್ರಯಾಣಿಕ ರೈಲುಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅವಘಡದಲ್ಲಿ 33 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಎಂದು ಪೊಲೀಸ್ ಅಧಿಕಾರಿತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ಉಮರ್ ತುಫೈಲ್ ಜಿಯೋ ನ್ಯೂಸ್‌ಗೆ ತಿಳಿಸಿದ್ದಾರೆ.

ದಕ್ಷಿಣ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಅವಘಡ ಸಂಭವಿಸಿದ ಬಳಿಕ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿರುವುದು ಹಾಗೂ ಬೋಗಿಗಳ ನಡುವೆ ಪ್ರಯಾಣಿಕರು ಸಿಲುಕಿರುವುದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿ ಕಾಡುತ್ತಿದೆ.

ADVERTISEMENT

ಬೋಗಿಯೊಂದರಲ್ಲಿ 25 ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆತಿ ಹಾಗೂ ದಹಾರ್ಕಿ ರೈಲು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದ್ದು, ಹಳಿ ತಪ್ಪಿದ ಕಾರಣ ನಿಂತಿದ್ದ ಮಿಲ್ಲಾತ್ ಎಕ್ಸ್‌ಪ್ರೆಸ್‌‌ಗೆ ಸಗೋರ್ಧಾಗೆ ಹೊರಟಿದ್ದ ಸರ್ ಸೈಯದ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.