ADVERTISEMENT

ಮರಣ ದಂಡನೆ | ರಾಜಕೀಯ ಪ್ರೇರಿತ ತೀರ್ಪು: ಶೇಖ್‌ ಹಸೀನಾ

ಪಿಟಿಐ
Published 17 ನವೆಂಬರ್ 2025, 16:26 IST
Last Updated 17 ನವೆಂಬರ್ 2025, 16:26 IST
ಶೇಖ್‌ ಹಸೀನಾ
ಶೇಖ್‌ ಹಸೀನಾ   

ಢಾಕಾ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಅಲ್ಲಿನ ಆಗಿನ ಪ್ರಧಾನಿ ಶೇಖ್‌ ಹಸೀನಾ ‘ಮಾನವೀಯತೆ ವಿರುದ್ಧ ಅಪರಾಧ ಎಸಗಿದ್ದಾರೆ’ ಎಂದು ತೀರ್ಮಾನಿಸಿರುವ ಬಾಂಗ್ಲಾದೇಶದಲ್ಲಿರುವ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು, 78 ವರ್ಷದ ಹಸೀನಾ ಅವರಿಗೆ ಸೋಮವಾರ ಮರಣ ದಂಡನೆ ವಿಧಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶೇಖ್‌ ಹಸೀನಾ, ‘ನನಗೆ ಭಯವಿಲ್ಲ’ ಜನಾದೇಶವನ್ನೇ ಪಡೆಯದ ಸರ್ಕಾರದಿಂದ ಈ ನ್ಯಾಯಮಂಡಳಿಯನ್ನು ರಚಿಸಲಾಗಿದೆ. ಇಂಥ ಮೋಸದ ನ್ಯಾಯಮಂಡಳಿಯ ನೀಡಿದ ತೀರ್ಪು ಇದು. ಈ ತೀರ್ಪು ರಾಜಕೀಯ ಪ್ರೇರಿತವಾಗಿದ್ದು ಪಕ್ಷಪಾತಿಯಾಗಿದೆ ಎಂದಿದ್ದಾರೆ.

ಮರಣದಂಡನೆ ವಿಧಿಸಿರುವುದು ಅಸಹ್ಯಕರ. ಜನರಿಂದ ಆಯ್ಕೆಯಾಗಿದ್ದ ಪ್ರಧಾನಿಯೊಬ್ಬರನ್ನು ಮತ್ತು ಅವಾಮಿ ಲೀಗ್‌ ಪಕ್ಷವನ್ನು ಅಳಿಸಿ ಹಾಕುವ ಉದ್ದೇಶವು ಮಧ್ಯಂತರ ಸರ್ಕಾರಕ್ಕಿದೆ ಎಂಬುದನ್ನು ಇದು ತೋರಿಸುತ್ತದೆ. ಎಲ್ಲ ಸಾಕ್ಷ್ಯಗಳನ್ನು ನ್ಯಾಯಯುತವಾಗಿ ತುಲನೆ ಮಾಡುವ ನ್ಯಾಯಮಂಡಳಿಯ ಎದುರು ನನ್ನ ಮೇಲೆ ಆರೋಪ ಹೊರಿಸಿದವರನ್ನು ಎದುರಿಸಲು ನಾನು ಭಯಪಡುವುದಿಲ್ಲ  ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.