ADVERTISEMENT

ಶೇಖ್‌ ಹಸೀನಾ ಹಸ್ತಾಂತರ ಕೋರಿ ಬಾಂಗ್ಲಾ ಪತ್ರ

ಪಿಟಿಐ
Published 23 ನವೆಂಬರ್ 2025, 15:53 IST
Last Updated 23 ನವೆಂಬರ್ 2025, 15:53 IST
ಶೇಖ್‌ ಹಸೀನಾ
ಶೇಖ್‌ ಹಸೀನಾ   

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತಕ್ಕೆ ಅಧಿಕೃತ ಪತ್ರ ಬರೆದಿದೆ ಎಂದು ಸರ್ಕಾರದ ಸಲಹೆಗಾರರೊಬ್ಬರು ಭಾನುವಾರ ತಿಳಿಸಿದ್ದಾರೆ.

2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ‘ಸಾಮೂಹಿಕ ಮಾರಣಹೋಮದ ಅಪರಾಧ’ಕ್ಕಾಗಿ ಆಗಿನ ಪ್ರಧಾನಿ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು (ಐಸಿಟಿ) ಮರಣದಂಡನೆ ವಿಧಿಸಿದೆ.

ಕಳೆದ ವರ್ಷದ ಆಗಸ್ಟ್‌ 5ರಂದು ಸರ್ಕಾರ ಪತನವಾದ ನಂತರ ದೇಶ ತೊರೆದಿರುವ ಹಸೀನಾ ಅವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

ADVERTISEMENT

‘ಹಸೀನಾ ಅವರ ಹಸ್ತಾಂತರ ಕೋರಿ ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್‌ ಮೂಲಕ ಅಧಿಕೃತ ರಾಜತಾಂತ್ರಿಕ ಪತ್ರ ಕಳುಹಿಸಲಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್‌ ತೌಹೀದ್ ಹೊಸೇನ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.