ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ನಾಲ್ಕನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಬಂಗಾಭಾಬನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿಬಾಂಗ್ಲಾದೇಶದ ಅಧ್ಯಕ್ಷ ಅಬ್ದುಲ್ ಹಮೀದ್ ಪ್ರತಿಜ್ಞಾ ವಿಧಿ ಬೋಧಿಸಿದರು.
24 ಮಂದಿ ಕ್ಯಾಬಿನೆಟ್ ದರ್ಜೆ ಸಚಿವರು ಹಾಗೂ 19 ಮಂದಿ ರಾಜ್ಯ ಸಚಿವರು (ಸ್ವತಂತ್ರ ನಿರ್ವಹಣೆ), ಮೂವರು ರಾಜ್ಯ ಸಚಿವರು ಹಸೀನಾ ಸಂಪುಟದಲ್ಲಿದ್ದಾರೆ.
ಹಳಬರಿಗೆ ಸಂಪುಟದಿಂದ ಕೊಕ್ ನೀಡಿದ್ದು ಮೊದಲ ಬಾರಿಗೆ 31 ಮಂದಿ ಹೊಸಬರಿಗೆ ಅವಕಾಶ ನೀಡಲಾಗಿದೆ. ರಕ್ಷಣೆ ಸೇರಿದಂತೆ ಪ್ರಮುಖ ಖಾತೆಗಳನ್ನು ಹಸೀನಾ ಅವರು ತಮ್ಮ ಬಳಿಯೇ ಇಟ್ಟುಕೊಳ್ಳುವ ಸಾಧ್ಯತೆ ಇದೆ
ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ 71 ವರ್ಷದ ಹಸೀನಾ, ನಾಲ್ಕನೇ ಅವಧಿಗೆ ಪ್ರಧಾನಿ ಹುದ್ದೆ ನಿರ್ವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.