ಹ್ಯೂಸ್ಟನ್: ಅಮೆರಿಕದ ಟೆಕ್ಸಾಸ್‌ನಲ್ಲಿ ದುಷ್ಕರ್ಮಿಯ ಗುಂಡಿನ ದಾಳಿಗೆ ಬಲಿಯಾಗಿರುವ ಭಾರತ ಸಂಜಾತ ಸಿಖ್ ಪೊಲೀಸ್ ಅಧಿಕಾರಿ ಸಂದೀಪ್ ಸಿಂಗ್ ಅವರ ಅಂತ್ಯ ಸಂಸ್ಕಾರ ಅಕ್ಟೋಬರ್ 2ರಂದು ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇವರಲ್ಲಿ ರಾಬರ್ಟ್ ಸೊಲಿಸ್ ಎಂಬಾತನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.