ADVERTISEMENT

ಸಿಂಗಪುರ: ಒಂದೂವರೆ ತಿಂಗಳಲ್ಲಿ ಕೋವಿಡ್‌ನಿಂದ ಮೊದಲ ಸಾವು

ಮಾರ್ಚ್ 13ರ ಬಳಿಕ ಕೊರೊನಾದಿಂದ ಮೊದಲ ಸಾವು

ಪಿಟಿಐ
Published 2 ಮೇ 2021, 14:51 IST
Last Updated 2 ಮೇ 2021, 14:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸಿಂಗಪುರ: ಸಿಂಗಪುರದಲ್ಲಿ ಒಂದೂವರೆ ತಿಂಗಳ ಬಳಿಕ ವೃದ್ಧರೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಮಾರ್ಚ್ 13ರಂದು ಕೋವಿಡ್‌ನಿಂದ 61 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ಆನಂತರ ಕೋವಿಡ್‌ನಿಂದ ಯಾರೂ ಮೃತಪಟ್ಟಿರಲಿಲ್ಲ. ಶನಿವರ 88ರ ವೃದ್ಧೆಯೊಬ್ಬರು ಮೃತಪಟ್ಟರು. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ ಕೇವಲ 31.ಶನಿವಾರ 34 ಹೊಸ ಪ್ರಕರಣಗಳು ವರದಿಯಾಗಿವೆ.

ಸಿಂಗಪುರದಲ್ಲಿ ಇದುವರೆಗೆ 61,179 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 60,765 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.