ADVERTISEMENT

ಸಿಂಗಾಪುರ: ಕೊರೊನಾದಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಪಿಟಿಐ
Published 24 ಜೂನ್ 2020, 3:08 IST
Last Updated 24 ಜೂನ್ 2020, 3:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಸಿಂಗಾಪುರ: ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡಿದ್ದ 48 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ದಿ ಸ್ಟ್ರೈಟ್ಸ್‌ ಟೈಮ್ಸ್‌ ವರದಿ ಮಾಡಿದೆ.

ಕೊರೊನಾ ಸೋಂಕು ಪರೀಕ್ಷೆಯಲ್ಲಿ ವರದಿ ಪಾಸಿಟಿವ್‌ ಬಂದಿದ್ದು, ಇತರೆ ಕಾರಣಗಳಿಂದಾಗಿ ರೋಗಿ ಸಾವನ್ನಪ್ಪಿದ ಹನ್ನೊಂದನೇ ಪ್ರಕರಣ ಇದಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ವ್ಯಕ್ತಿ ಮಂಗಳವಾರ ಬೆಳಿಗ್ಗೆ ವಲಸೆ ಕಾರ್ಮಿಕರ ತಾತ್ಕಾಲಿಕ ವಸತಿ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇವರಿಗೆ ಮೇ 15 ರಂದು ಕೊರೊನಾ ಪಾಸಿಟಿವ್‌ ವರದಿ ಬಂದಿತ್ತು.

ADVERTISEMENT

ಕೋವಿಡ್‌–19 ಸಾವಿಗೆ ಪ್ರಾಥಮಿಕ ಅಥವಾ ಅಧಿಕೃತ ಕಾರಣಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಂಕಿನಿಂದ ಚೇತರಿಸಿಕೊಂಡಿರುವ ಸುಮಾರು 3,700 ಹೆಚ್ಚು ವಿದೇಶಿ ಕಾರ್ಮಿಕರನ್ನು ಮಂಗಳವಾರದ ವೇಳೆಗೆ ಕೆಲಸಕ್ಕೆ ಮರಳಲು ಅವಕಾಶ ನೀಡಲಾಗಿತ್ತು. ಜೊತೆಗೆ, ತಾತ್ಕಾಲಿಕ ವಸತಿ ನಿಲಯಗಳಲ್ಲಿ 3,23,000 ವಲಸೆ ಕಾರ್ಮಿಕರು ವಾಸಿಸುತ್ತಿದ್ದು, ವೈದ್ಯಕೀಯ ಪರೀಕ್ಷೆಯನ್ನು ತೀವ್ರಗೊಳಿಸಲಾಗಿದೆ.

ನಗರದಲ್ಲಿ ಮಂಗಳವಾರ ಒಂದೇ ದಿನ 405 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 35,985 ಮಂದಿ ಕೋವಿಡ್‌ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

ಸಿಂಗಾಪುರದಲ್ಲಿ ಕೋವಿಡ್‌ ಸೋಂಕಿಗೆ ಇದುವರೆಗೆ 26 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.