ADVERTISEMENT

ಪಾಕಿಸ್ತಾನ: ಗುಂಡಿನ ದಾಳಿ; 6 ಪೊಲೀಸರ ಹತ್ಯೆ

ಪಿಟಿಐ
Published 16 ನವೆಂಬರ್ 2022, 11:18 IST
Last Updated 16 ನವೆಂಬರ್ 2022, 11:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪೆಶಾವರ: ವಾಯವ್ಯ ಪಾಕಿಸ್ತಾನದ ಖೈಬರ್‌ ಪಖ್ತುಂಖ್ವ ಪ್ರಾಂತ್ಯದಲ್ಲಿ ಬುಧವಾರ ಶಸ್ತ್ರಸಜ್ಜಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಆರು ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಇಲುಮ್‌ ದೀನ್‌ ಮತ್ತು ಐವರು ಕಾನ್‌ಸ್ಟೆಬಲ್ ಮೃತಪಟ್ಟಿದ್ದಾರೆ.ದಕ್ಷಿಣ ವಜಿರಿಸ್ತಾನದ ಲಕ್ಕಿ ಮರ್ವತ್‌ಜಿಲ್ಲೆಯಲ್ಲಿ, ಚಲಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಂತಕರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ADVERTISEMENT

ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಆಂತರಿಕ ವ್ಯವಹಾರಗಳ ಸಚಿವ ರಾಣಾ ಸನಾವುಲ್ಲಾಹ್ ದಾಳಿಯನ್ನು ಖಂಡಿಸಿ, ವರದಿ ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.